ADVERTISEMENT

ಆನ್‌ಲೈನ್ ಶಿಕ್ಷಣದಿಂದ ಕೊಳೆಗೇರಿ ಮಕ್ಕಳಿಗೆ ಅನ್ಯಾಯ

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಆತಂಕ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:22 IST
Last Updated 30 ಜೂನ್ 2020, 9:22 IST
ಆನ್‌ಲೈನ್‌ ಕ್ಲಾಸ್‌ –ಸಾಂದರ್ಭಿಕ ಚಿತ್ರ
ಆನ್‌ಲೈನ್‌ ಕ್ಲಾಸ್‌ –ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೆ ತಂದರೆ ಕೊಳೆಗೇರಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ’ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಆತಂಕ ವ್ಯಕ್ತಪಡಿಸಿದೆ.

ಆನ್‌ಲೈನ್ ಶಿಕ್ಷಣ ಮಾರ್ಗಸೂಚಿ ಸಮಿತಿಗೆ ಪತ್ರ ಬರೆದಿರುವ ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ‘ರಾಜ್ಯದಲ್ಲಿ 2,850ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ ಒಂದು ಕೋಟಿಗೂ ಹೆಚ್ಚು ಜನ ವಾಸ ಮಾಡುತ್ತಿದ್ದಾರೆ. ಇಲ್ಲಿನ ಶೇ 75ರಷ್ಟು ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಕಲಿಯುತ್ತಿದ್ದಾರೆ. ಇವರಿಗೆ ಆನ್‌ಲೈನ್ ಶಿಕ್ಷಣ ಕೊಡಿಸುವಷ್ಟು ವ್ಯವಸ್ಥೆಯನ್ನು ಪೋಷಕರು ಹೊಂದಿಲ್ಲ’ ಎಂದು ಹೇಳಿದ್ದಾರೆ.

‘ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಇಲ್ಲಿನ ನಿವಾಸಿಗಳು ಲಾಕ್‌ಡೌನ್ ನಂತರ ಕೂಲಿ ಸಿಗದೆ ಬರಿಗೈ ಆಗಿದ್ದಾರೆ. ಈ ಸಂದರ್ಭದಲ್ಲಿಮಕ್ಕಳಿಗೆ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಕೊಡಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.