
ಪ್ರಜಾವಾಣಿ ವಾರ್ತೆ
ಸಂಗ್ರಹ ಚಿತ್ರ
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಇಲ್ಲಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರು ವಯೋ ಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯಲು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಮೂರು ದಿನ ಚಿಕಿತ್ಸೆ ನೀಡಿದ ಬಳಿಕ ಮಣಿಪಾಲ್ ಆಸ್ಪತ್ರೆಗೆ ಅವರನ್ನು ಸ್ಥಳಾಂತರ ಮಾಡಲಾಗಿತ್ತು.
ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.