
ಸ್ನೇಹಮಯಿ ಕೃಷ್ಣ
ಬೆಂಗಳೂರು: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ‘ನನ್ನ ಫೋಟೊ, ನಕಲಿ ದಾಖಲೆಗಳು ಹಾಗೂ ಧ್ವನಿ ಕ್ಲಿಪ್ ಹಾಕಿ ಅಪಪ್ರಚಾರ ಮಾಡಿದ್ದಾರೆ’ ಎಂದು ಆರೋಪಿಸಿ ನಟೇಶ್ ಅವರು ದೂರು ನೀಡಿದ್ದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ.ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಈ ಹಿಂದೆ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದರು.
ಸ್ನೇಹಮಯಿ ಕೃಷ್ಣ ಮನೆಯಲ್ಲಿ ತಪಾಸಣೆ
ಮೈಸೂರು: ಇಲ್ಲಿನ ಭೈರವೇಶ್ವರ ನಗರದಲ್ಲಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರ ಕಚೇರಿ ಹಾಗೂ ಮನೆಯಲ್ಲಿ ಬೆಂಗಳೂರು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಮತ್ತೊಂದು ತಂಡ ಅವರ ಮನೆಯಲ್ಲಿ ತಪಾಸಣೆ ನಡೆಸುತ್ತಿದೆ. ಪೊಲೀಸರು ಮನೆಯವರ ವಿಡಿಯೊ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.