ADVERTISEMENT

ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ನಿಧನಕ್ಕೆ ಎಚ್.ಡಿ. ಕುಮಾರಸ್ವಾಮಿ ಕಂಬನಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2020, 9:35 IST
Last Updated 25 ಏಪ್ರಿಲ್ 2020, 9:35 IST
   

ಬೆಂಗಳೂರು: ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ ಎಂದು ಮಾಜಿ ಸಿಎಂ ಎಚ್.‌ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಮ್ಮ ಧ್ವನಿ' ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು. ಅಕಾಲಿಕವಾಗಿ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಹೇಳಿದ್ದಾರೆ.

ಪ್ರಗತಿಪರ ಚಿಂತಕ- ಮಹೇಂದ್ರ ಕುಮಾರ್‌ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು. ಶುಕ್ರವಾರ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.