
Social boycott
ಸುವರ್ಣ ವಿಧಾನಸಭೆ (ಬೆಳಗಾವಿ): ‘ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, ಅದನ್ನು ಅಪರಾಧವೆಂದು ಪರಿಗಣಿಸಿ ₹ 1 ಲಕ್ಷ ದಂಡ ಹಾಗೂ ಮೂರು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲು ಅವಕಾಶವಿರುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆ– 2025’ ಅನ್ನು ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾಯಿತು.
ಮಸೂದೆಯನ್ನು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮಂಡಿಸಿದರು.
ಸಾಮಾಜಿಕ ಬಹಿಷ್ಕಾರವನ್ನು ಸಂಪೂರ್ಣ ನಿಷೇಧಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಬಹಿಷ್ಕಾರ ತೀರ್ಮಾನ ತೆಗೆದುಕೊಂಡವರು, ಈ ಉದ್ದೇಶದಿಂದ ಸಭೆ, ಪಂಚಾಯಿತಿ, ಜಮಾವಣೆ, ಅಭಿಪ್ರಾಯ ಸಂಗ್ರಹ ನಡೆಸುವುದು, ಬಹಿಷ್ಕಾರಕ್ಕೆ ಪ್ರತ್ಯಕ್ಷ, ಪರೋಕ್ಷ ಸಹಾಯ, ಒತ್ತಡ, ಪ್ರಚೋದನೆ ನೀಡುವವರನ್ನೂ ಅಪರಾಧಿಗಳೆಂದು ಪರಿಗಣಿಸಿ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಮಸೂದೆ ಅವಕಾಶ ಕಲ್ಪಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.