ADVERTISEMENT

ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ: ಬಿ.ಎಸ್ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 6:54 IST
Last Updated 17 ಜನವರಿ 2020, 6:54 IST
ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.   

ಬೆಂಗಳೂರು: ಉತ್ತಮ ಬದುಕಿಗೆ ಸಮಾಜ ವಿಜ್ಞಾನದ ಸಂಶೋಧನೆ ಅಗತ್ಯ, ವಿಜ್ಞಾನ ಮತ್ತು ಸಮಾಜ ಜತೆ ಜತೆಯಾಗಿ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಆರಂಭವಾದ 43ನೇ ಭಾರತೀಯ ಸಮಾಜ ವಿಜ್ಞಾನ ಕಾಂಗ್ರೆಸ್ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಸಮಾವೇಶಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಾರಿಗೆ ತರುವ ಕೆಲಸ ಆಗಬೇಕು ಎಂದು ತಿಳಿಸಿದರು.

ADVERTISEMENT

ಭಾರತೀಯ ಸಮಾಜ ವಿಜ್ಞಾನ ಅಕಾಡೆಮಿ ಸಹಯೋಗದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಈ ಸಮಾವೇಶ ಹಮ್ಮಿಕೊಂಡಿದೆ. ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ 21ರ ವರೆಗೆ ಸಮಾವೇಶ ನಡೆಯಲಿದ್ದು, 700 ಪ್ರಬಂಧಗಳನ್ನು ಮಂಡಿಸಲಾಗುತ್ತದೆ.

ಸಿಎಂಗೆ ಅನಾರೋಗ್ಯ
ಅನಾರೋಗ್ಯ ಕಾರಣ ಸಿಎಂ ಯಡಿಯೂರಪ್ಪಕಾರ್ಯಕ್ರಮಕ್ಕೆ ತಡವಾಗಿ ಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.