ADVERTISEMENT

ಗ್ರಾಮ ಪಂಚಾಯಿತಿಗಳಿಗೆ ಸೌರವಿದ್ಯುತ್‌: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 21:44 IST
Last Updated 16 ಫೆಬ್ರುವರಿ 2021, 21:44 IST
   

ಬೆಂಗಳೂರು: ‘ವಿದ್ಯುತ್‌ ಸಮಸ್ಯೆ ನಿವಾರಿಸುವ ಸಲುವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೌರ ವಿದ್ಯುತ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರಿಂದ ಪಂಚಾಯಿತಿಗಳಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿಯ ನೂತನ ಸದಸ್ಯರ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿಗಳಿಗೆ ವಿದ್ಯುತ್‌ ಬಿಲ್‌ ಹೊರೆಯಾಗಿ ಪರಿಣಮಿಸಿತ್ತು. ಹೀಗಾಗಿ ಪ್ರತಿ ಪಂಚಾಯಿತಿಗೆ ₹5 ಲಕ್ಷ ವೆಚ್ಚದಲ್ಲಿ ಸೋಲಾರ್‌ ವಿದ್ಯುತ್‌ ಕಲ್ಪಿಸಲಾಗುತ್ತಿದೆ. ವಿದ್ಯುತ್‌ ಸಮಸ್ಯೆಯ ನೆಪ ಹೇಳಿ ಅಧಿಕಾರಿಗಳು ರೈತರಿಗೆ ಅಗತ್ಯ ದಾಖಲೆ ಒದಗಿಸಲು ವಿಳಂಬ ಮಾಡುತ್ತಿದ್ದರು. ಇನ್ನು ಮುಂದೆ ಅದಕ್ಕೆ ಆಸ್ಪದ ಇರುವುದಿಲ್ಲ. ಪಂಚಾಯಿತಿಗಳು ತಮಗೆ ಅಗತ್ಯವಿರುವಷ್ಟು ವಿದ್ಯುತ್‌ ಬಳಸಿಕೊಂಡು ಉಳಿದಿದ್ದನ್ನು ಗ್ರಿಡ್‌ಗಳಿಗೆ ಮಾರಾಟ ಮಾಡಿ ಆದಾಯ ಗಳಿಸಬಹುದು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.