ADVERTISEMENT

‘ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಲಿ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 16:28 IST
Last Updated 23 ನವೆಂಬರ್ 2022, 16:28 IST

ಬೆಂಗಳೂರು: ‘ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಅಕ್ಕಲಕೋಟೆ ಕರ್ನಾಟಕದ ಭಾಗವಾಗಬೇಕು ಎಂಬುದು ನಮ್ಮ ಆಗ್ರಹ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹೇಳಿಕೆ ಕುರಿತು ಬುಧವಾರ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಫಡಣವೀಸ್‌ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ. ರಾಜ್ಯದ ನೆಲ, ಜಲ, ಗಡಿ ರಕ್ಷಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ’ ಎಂದಿದ್ದಾರೆ.

‘ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರವು ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು 2004 ರಿಂದಲೂ ದಾವೆಗಳನ್ನು ಹೂಡುತ್ತಿದೆ. ಈವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.