ADVERTISEMENT

Karnataka Cabinet Meeting: ಸೋಲೂರು ನೆಲಮಂಗಲಕ್ಕೆ ಸೇರಿಸಲು ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 23:10 IST
Last Updated 4 ಸೆಪ್ಟೆಂಬರ್ 2025, 23:10 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ಸೇರಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈ ನಿರ್ಧಾರದಿಂದ ಹೋಬಳಿಯಲ್ಲಿ ಆರ್ಥಿಕ, ಶೈಕ್ಷಣಿಕ ಮತ್ತು ಕೈಗಾರಿಕಾ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ADVERTISEMENT

ಮೂರು ಕಡೆ ನೆಲಮಂಗಲ ತಾಲ್ಲೂಕಿನಿಂದ ಸುತ್ತುವರೆದಿರುವ ಸೋಲೂರು ಹೋಬಳಿಯನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸಬೇಕು ಎಂಬುದು ಸ್ಥಳೀಯರ ಮತ್ತು ಸ್ಥಳೀಯ ಜನಪ್ರತಿನಿಧಿಗಳ ಬಹುವರ್ಷಗಳ ಬೇಡಿಕೆಯಾಗಿತ್ತು. ನೆಲಮಂಗಲ ಶಾಸಕ ಎನ್‌.ಶ್ರೀನಿವಾಸ್‌ ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಲೂರು ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸುವ ವೇಳೆ, ಹೋಬಳಿಯನ್ನು ನೆಲಮಂಗಲ ತಾಲ್ಲೂಕಿಗೆ ಸೇರಿಸುವ ಪ್ರಸ್ತಾವವನ್ನು ಪರಿಗಣಿಸುತ್ತೇವೆ’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.