ADVERTISEMENT

ಸೋನಿಯಾ, ರಾಹುಲ್‌ ಬಂಧಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ.ಶಿವಕುಮಾರ್‌ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜೂನ್ 2022, 15:57 IST
Last Updated 9 ಜೂನ್ 2022, 15:57 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮುಖಂಡ ರಾಹುಲ್‌ ಗಾಂಧಿ ಅವರಿಗೆ ಬುಧವಾರ ಇ.ಡಿ ಸಮನ್ಸ್‌ ಜಾರಿ ಮಾಡಿದೆ.

ಈ ವಿಚಾರವಾಗಿ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಹದ್ದುಮೀರಿ ವರ್ತಿಸುತ್ತಿದೆ. ರಾಜಕೀಯ ಎದುರಾಳಿಗಳನ್ನು ಸುಳ್ಳು ಪ್ರಕರಣಗಳ ಮೂಲಕ ಬಂಧಿಸುವ ಕುತಂತ್ರಕ್ಕಿಳಿದ ಬಿಜೆಪಿಗೆ ನಾಚಿಕೆಯಾಗಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ಸೋನಿಯಾ ಗಾಂಧಿ ಹಾಗೂರಾಹುಲ್ ಗಾಂಧಿಯವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬಂಧಿಸಲು ಇ.ಡಿ ಷಡ್ಯಂತ್ರ ನಡೆಸಿದೆ. ಬಿಜೆಪಿಯ ತಾಳಕ್ಕೆ ತಕ್ಕಂತೆ ಇ.ಡಿ ಕುಣಿಯುತ್ತಿದೆ’ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.