ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ರಾಜ್ಯಕ್ಕೆ ಬರಲಿದ್ದು, ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಗುರುವಾರ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
‘ಸೋಮವಾರ ರಾಜ್ಯಕ್ಕೆ ಬರಲಿರುವ ಸೋನಿಯಾ, ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ತಂಗುವರು. ಗುರುವಾರ ಒಂದು ದಿನ ಮಾತ್ರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು’ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಗುರುವಾರವೇ ಪಾದಯಾತ್ರೆಯನ್ನು ಸೇರಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.