ADVERTISEMENT

ಮಲೆನಾಡಿನ ಸೊಪ್ಪಿನಬೆಟ್ಟ ಜಮೀನು ಬೇಕಾಬಿಟ್ಟಿ ಹಂಚಿಕೆ: ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 20:08 IST
Last Updated 25 ನವೆಂಬರ್ 2025, 20:08 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮಲೆನಾಡಿನ ಸೊಪ್ಪಿನಬೆಟ್ಟ ಜಮೀನನ್ನು ಬೇಕಾಬಿಟ್ಟಿಯಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಲಾಗಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಸಾಗರದ ಮಂಕಾಳೆ ನಿವಾಸಿಗಳಾದ ಎಂ.ಎನ್.ವನಿತಾ ಸೇರಿದಂತೆ ಐವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಕಂದಾಯ ಇಲಾಖೆ ಕಾರ್ಯದರ್ಶಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿದಂತೆ ಉಳಿದ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು 2026ರ ಫೆಬ್ರುವರಿ 17ಕ್ಕೆ ಮುಂದೂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.