ಬೆಂಗಳೂರು: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ದೋಷಮುಕ್ತಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
‘ಸಾಕ್ಷ್ಯಾಧಾರ ಕೊರತೆಯ ಹಿನ್ನೆಲೆಯಲ್ಲಿ ಸಂತೋಷ್ ರಾವ್ ಅವರನ್ನು ದೋಷಮುಕ್ತಗೊಳಿಸಲಾಗಿದೆ‘ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ.ಸಂತೋಷ್ ಶುಕ್ರವಾರ ತೀರ್ಪು ಪ್ರಕಟಿಸಿದರು.
ಪ್ರಕರಣವೇನು?: ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ತೆರಳುವ ವೇಳೆ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ಅವರ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಸಂತೋಷ್ ರಾವ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.