ADVERTISEMENT

ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 10:12 IST
Last Updated 20 ಜನವರಿ 2026, 10:12 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮಾಜವಾದಿ ಅಧ್ಯಯನ ಕೇಂದ್ರ, ಸಮಾಜವಾದಿಗಳ ಸಮಾಗಮ ನಗರದಲ್ಲಿ ಆಯೋಜಿಸಿದ್ದ ದಕ್ಷಿಣ ಭಾರತ ಸಮಾಜವಾದಿಗಳ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಕೇಂದ್ರ ವ್ಯವಸ್ಥೆ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಕೇಂದ್ರದಿಂದ ಬರಬೇಕಾದ ಅನುದಾನ ಕಡಿಮೆಯಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚು ಅನ್ಯಾವವಾಗುತ್ತಿದ್ದು, ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದು. ಆದರೆ ನಮಗೆ ಕೇಂದ್ರದಿಂದ ಬರುತ್ತಿರುವ ಅನುದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಈಗ ಮನರೇಗ ಯೋಜನೆ ಮೂಲಕ ನೀಡುತ್ತಿದ್ದ ಅನುದಾನದ ಪ್ರಮಾಣ ತಗ್ಗಿಸಿದ್ದು, ರಾಜ್ಯಗಳ ಆರ್ಥಿಕ ವ್ಯವಸ್ಥೆಗದ ಹೊಡೆತ ಬೀಳಲಿದೆ ಎಂದರು.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ವ್ಯಾಪ್ತಿಯ ಕ್ಷೇತ್ರಗಳ ಪ್ರಮಾಣ ಕಡಿಮೆ ಮಾಡಿ ಹಿಂದಿ ಭಾಷೆ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಹುನ್ನಾರ ನಡೆದಿದೆ. ಇದನ್ನು ಬಲವಾಗಿ ವಿರೋಧಿಸಿ ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ ಎಂದರು.

ಸಮಾಜವಾದಿಗಳ ಬೇಡಿಕೆಯಂತೆ ಕರ್ನಾಟಕದಲ್ಲಿ ಲೋಹಿಯಾ ಭವನ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ, ಶಾಸಕ ಬಿ.ಆರ್. ಪಾಟೀಲ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.