
ಪ್ರಾತಿನಿಧಿಕ ಚಿತ್ರ
ಬೆಳಗಾವಿ: ಸರ್ಕಾರದ ಯಾವುದೇ ಇಲಾಖೆಗಳು, ನಿಗಮ ಮಂಡಳಿಗಳು ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಸ್ಮರಣಿಕೆ ಅಥವಾ ಟ್ರೋಫಿ ಬಳಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿಯ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಈಗಾಗಲೇ ಖರೀದಿಸಿರುವ ಸ್ಮರಣಿಕೆಗಳನ್ನು ಇಲಾಖಾ ಮುಖ್ಯಸ್ಥರ ಅನುಮತಿ ಪಡೆದು ವಿಲೇವಾರಿ ಅಥವಾ ದಾನ ಮಾಡಬಹುದು. ಭವಿಷ್ಯದಲ್ಲಿ ಇಂತಹ ಸಾಮಗ್ರಿಗಳನ್ನು ಖರೀದಿಸಲು ಬಜೆಟ್‌ನಲ್ಲಿಯೂ ಹಣ ಮೀಸಲಿಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
ಗಣ್ಯರ ಭೇಟಿ, ಸನ್ಮಾನ ಸೇರಿದಂತೆ ಸರ್ಕಾರದ ಎಲ್ಲ ಅಧಿಕೃತ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯ ಆಗಲಿದೆ. ಕ್ರೀಡಾಪಟುಗಳಿಗೆ ನೀಡುವ ಟ್ರೋಫಿಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ, ಅಂತಹ ಟ್ರೋಫಿಗಳು ಪ್ಲಾಸ್ಟಿಕ್ ಮುಕ್ತ ಆಗಿರಬೇಕು ಎಂಬ ಷರತ್ತು ವಿಧಿಸಲಾಗಿದೆ.
ಪರಿಸರಸ್ನೇಹಿ ಸಸ್ಯಗಳು, ಪುಸ್ತಕಗಳು, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಕರಕುಶಲ ಸಾಮಗ್ರಿಗಳನ್ನು ಬಳಸಬಹುದು. ಮರು ಬಳಕೆಯ ಕಾಗದದ ಮೇಲೆ ಮೆಚ್ಚುಗೆ ಪ್ರಮಾಣಪತ್ರಗಳನ್ನು ಸಭೆ ಸಮಾರಂಭಗಳಲ್ಲಿ ವಿತರಣೆ ಮಾಡಬಹುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.