ADVERTISEMENT

82.67 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ

​ಪ್ರಜಾವಾಣಿ ವಾರ್ತೆ
Published 10 ಮೇ 2022, 4:19 IST
Last Updated 10 ಮೇ 2022, 4:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 82.67 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದ್ದು, ಇದುವರೆಗೆ 1.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬಿತ್ತನೆ ಮಾಡಲಾಗಿದೆ.

ರಾಜ್ಯದಲ್ಲಿ ಬಿತ್ತನೆ ಬೀಜದ ಕೊರತೆ ಇಲ್ಲ. ಈಗಾಗಲೇ ವಿತರಣೆ ಕಾರ್ಯ ಪ್ರಗತಿಯಲ್ಲಿದೆ. 5.38 ಲಕ್ಷ ಕ್ವಿಂಟಲ್‌ ಬೇಡಿಕೆ ಇದ್ದು, 8.65 ಲಕ್ಷ ಕ್ವಿಂಟಲ್‌ ಬಿತ್ತನೆ ಬೀಜಗಳು ಲಭ್ಯ ಇದೆ. ರಾಜ್ಯದಾದ್ಯಂತ ರೈತ ಸಂಪರ್ಕ ಕೇಂದ್ರಗಳ ಮೂಲಕ ಇಲ್ಲಿಯವರೆಗೆ 3,505.8 ಕ್ವಿಂಟಲ್‌ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಮುಂಗಾರು ಹಂಗಾಮಿಗೆ 26.76 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಅಗತ್ಯ ಇದೆ. ಪ್ರಸ್ತುತ 7.15 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಖಾಸಗಿ ಮಾರಾಟಗಾರರು ಮತ್ತು ಸಹಕಾರ ಸಂಘಗಳಲ್ಲಿ ಸಂಗ್ರಹ ಇದೆ. ರಸಗೊಬ್ಬರದ ಕೊರತೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ADVERTISEMENT

ಬೆಳೆ ವಿಮೆ: 2021–22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1.267 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದರು. ಈಗಾಗಲೇ ಒಟ್ಟು 2.10 ಲಕ್ಷ ರೈತರಿಗೆ ₹135.72 ಕೋಟಿ ಬೆಳೆ ವಿಮೆ ಪರಿಹಾರವನ್ನು ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಪಾವತಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.