ADVERTISEMENT

ಎಸ್‌ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ: ಹರಿದಾಡುತ್ತಿರುವುದು ಸುಳ್ಳು ವದಂತಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 11:28 IST
Last Updated 3 ಜನವರಿ 2026, 11:28 IST
<div class="paragraphs"><p>ಪವನ್ ನೆಜ್ಜೂರ್</p></div>

ಪವನ್ ನೆಜ್ಜೂರ್

   

ಶಿರಾ (ತುಮಕೂರು): ಗಲಭೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಬಳ್ಳಾರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪವನ್‌ ನೆಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಿದಾಡಿದ್ದು, ಇದು ಕೊನೆಗೆ ಸುಳ್ಳು ವದಂತಿ ಎಂಬುದು ಗೊತ್ತಾಗಿದೆ.

ಕೆಲಸದಿಂದ ಅಮಾನತುಗೊಂಡಿದ್ದರಿಂದ ಮನನೊಂದು ಶಿರಾ ತಾಲ್ಲೂಕಿನ ಬರಗೂರು ಬಳಿಯ ಸ್ನೇಹಿತರೊಬ್ಬರ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವದಂತಿ ಹರಿದಾಡಿತ್ತು. ಫಾರ್ಮ್‌ಹೌಸ್‌ನಲ್ಲಿ ಪವನ್‌ ನೆಜ್ಜೂರ್‌ ವಿಶ್ರಾಂತಿ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಎನ್ನಲಾಗಿದೆ.

ADVERTISEMENT

‘ಆತ್ಮಹತ್ಯೆಗೆ ಪ್ರಯತ್ನಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಅವರು ಆಸ್ಪತ್ರೆಗೂ ದಾಖಲಾಗಿಲ್ಲ. ದೂರು ಸಹ ಬಂದಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸ್ಪಷ್ಟಪಡಿಸಿದರು.

ಜ. 1ರಂದು ರಾತ್ರಿ ಬಳ್ಳಾರಿ ನಗರದಲ್ಲಿ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಸಂಭವಿಸಿದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಕರ್ತವ್ಯ ಲೋಪದ ಆರೋಪದ ಮೇಲೆ ಪವನ್‌ ನೆಜ್ಜೂರ್‌ ಅವರನ್ನು ಅಮಾನತು ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.