ADVERTISEMENT

ಬಾಹ್ಯಾಕಾಶ ಪಾರ್ಕ್: ಸರ್ಕಾರ – ಇನ್-ಸ್ಪೇಸ್‌ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:20 IST
Last Updated 8 ಮೇ 2025, 15:20 IST
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇನ್-ಸ್ಪೇಸ್‌ ಅಧ್ಯಕ್ಷ ಪವನ್ ಗೋಯೆಂಕಾ ಅವರ ಸಮ್ಮುಖದಲ್ಲಿ ಏಕರೂಪ್ ಕೌರ್ ಮತ್ತು  ಲೋಚನ್ ಸೆಹ್ರಾ ಅವರು ಒಪ್ಪಂದಗಳಿಗೆ ಸಹಿ ಹಾಕಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇನ್-ಸ್ಪೇಸ್‌ ಅಧ್ಯಕ್ಷ ಪವನ್ ಗೋಯೆಂಕಾ ಅವರ ಸಮ್ಮುಖದಲ್ಲಿ ಏಕರೂಪ್ ಕೌರ್ ಮತ್ತು  ಲೋಚನ್ ಸೆಹ್ರಾ ಅವರು ಒಪ್ಪಂದಗಳಿಗೆ ಸಹಿ ಹಾಕಿದರು.   

ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನಗಳ ಶ್ರೇಷ್ಠತಾ ಕೇಂದ್ರ ಮತ್ತು ಬಾಹ್ಯಾಕಾಶ ಉತ್ಪಾದನಾ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮತ್ತು‌ ಇನ್-ಸ್ಪೇಸ್‌ (ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ) ಎರಡು ಒಪ್ಪಂದಗಳಿಗೆ ಸಹಿ ಹಾಕಿವೆ.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇನ್-ಸ್ಪೇಸ್‌ ಅಧ್ಯಕ್ಷ ಪವನ್ ಗೋಯೆಂಕಾ ಅವರ ಸಮ್ಮುಖದಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಮತ್ತು ಇನ್-ಸ್ಪೇಸ್‌ ಜಂಟಿ ಕಾರ್ಯದರ್ಶಿ ಲೋಚನ್ ಸೆಹ್ರಾ ಈ ಒಪ್ಪಂದಗಳಿಗೆ ಸಹಿ ಹಾಕಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ‘ಉದ್ಯಮಶೀಲತೆ ಬೆಳೆಸುವ, ಉನ್ನತ ಕೌಶಲದ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಬಾಹ್ಯಾಕಾಶ ಉತ್ಪಾದನೆಯಲ್ಲಿ ಜಾಗತಿಕ ಹೂಡಿಕೆ ಆಕರ್ಷಿಸುವ ಮೂಲಕ ಕರ್ನಾಟಕದ ನ್ಯೂಸ್ಪೇಸ್ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದಿದ್ದಾರೆ.

ADVERTISEMENT

‘ಇನ್-ಸ್ಪೇಸ್‌ ಜೊತೆಗಿನ ಸಹಯೋಗವು ನಮ್ಮ ಕರಡು ಬಾಹ್ಯಾಕಾಶ ತಂತ್ರಜ್ಞಾನ ನೀತಿಯಲ್ಲಿ ವಿವರಿಸಿರುವ ದೃಷ್ಟಿಕೋನದ ಪ್ರತಿಬಿಂಬವಾಗಿದೆ. ರಾಜ್ಯದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳನ್ನು ಕೈಗಾರಿಕೀಕರಣಗೊಳಿಸುವ ಪ್ರಯತ್ನಗಳಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಮತ್ತು ಸ್ಪೇಸ್ ಮ್ಯಾನುಫ್ಯಾಕ್ಚರಿಂಗ್ ಪಾರ್ಕ್ ಪ್ರಮುಖ ಹೆಜ್ಜೆಗಳಾಗಿವೆ. ಈ ಒಪ್ಪಂದಗಳು ಮುಂದಿನ ಪೀಳಿಗೆಯ ಉದ್ಯಮಶೀಲತೆಯನ್ನು ಉತ್ತೇಜಿಸಲು ಸಹಾಯ ಮಾಡಲಿದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.