ADVERTISEMENT

ಸ್ಪೀಕರ್‌ ನೇತೃತ್ವದ ಸದನ ನಾಯಕರ ಸಭೆ ಸಂಪೂರ್ಣ ವಿಫಲ 

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 6:45 IST
Last Updated 13 ಫೆಬ್ರುವರಿ 2019, 6:45 IST
   

ಬೆಂಗಳೂರು: ಆಡಿಯೊ ಪ್ರಕರಣ ಕುರಿತು ವಿಧಾನಸಭಾ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ನೇತೃತ್ವದಲ್ಲಿನಡೆದ ಸದನ ನಾಯಕರ ಸಭೆ ಸಂಪೂರ್ಣ ವಿಫಲವಾಗಿದೆ.

ಆಡಿಯೊ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸುವ ಸರ್ಕಾರದ ಕ್ರಮಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ನ್ಯಾಯಾಂಗ ತನಿಖೆ ಅಥವಾ ಸದನ ಸಮಿತಿ ತನಿಖೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಒಪ್ಪದ ದೋಸ್ತಿ ಎಸ್‌ಐಟಿ ತನಿಖೆ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಸಭೆಯಲ್ಲಿ ಉಭಯ ಸದನಗಳ ನಾಯಕರಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣ ಭೈರೇಗೌಡ, ಶಾಸಕರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ, ಮಾಧುಸ್ವಾಮಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.