ಸ್ಪೀಕರ್ ಖಾದರ್
ಬೆಂಗಳೂರು: ‘18 ಬಿಜೆಪಿ ಶಾಸಕರ ಅಮಾನತನ್ನು ರದ್ದುಪಡಿಸಿ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನನಗೆ ಪತ್ರ ಬರೆದದ್ದು ನಿಜ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿ ಶಾಸಕರು ಮತ್ತು ನಾಯಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಅದರ ಬೆನ್ನಲ್ಲೇ ರಾಜ್ಯಪಾಲರು ಪತ್ರ ಬರೆದಿದ್ದಾರೆ. ನಾನು ಪ್ರವಾಸದಲ್ಲಿ ಇದ್ದ ಕಾರಣ, ಕರೆಮಾಡಿ ಅವರೊಂದಿಗೆ ಚರ್ಚಿಸಿದೆ’ ಎಂದರು.
‘ರಾಜ್ಯಪಾಲರ ಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಅವರು ಏನು ಹೇಳಿದ್ದಾರೆ ಎಂಬುದನ್ನು ಪರಿಗಣಿಸಿ, ನಿಯಮಾನುಸಾರ ಉತ್ತರ ಬರೆಯುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.