ADVERTISEMENT

ಕೋವಿಡ್-19 ಸೋಂಕಿತ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 16:13 IST
Last Updated 27 ಜುಲೈ 2020, 16:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ನಿರ್ಬಂಧಿತ ವಲಯಗಳಲ್ಲಿ ವಾಸವಿದ್ದು, ಕಚೇರಿಗೆ ಬರಲು ಸಾಧ್ಯವಾಗದ ಮತ್ತು ಸೋಂಕಿಗೆ ಒಳಗಾಗಿ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿ ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ಕೋರಿಕೆ ಸಲ್ಲಿಸಿತ್ತು. ಈ ಕೋರಿಕೆಗೆ ಮನ್ನಣೆ ನೀಡಿರುವ ಸರ್ಕಾರ, ಕರ್ನಾಟಕ ಸಿವಿಲ್‌ ಸೇವೆಗಳ ನಿಯಮಾವಳಿಗೆ ತಿದ್ದುಪಡಿ ಮಾಡಿದೆ.

ರಾಜ್ಯ ಸರ್ಕಾರಿ ನೌಕರರು ಕಂಟೈನ್‌ಮೆಂಟ್‌ ವಲಯದಲ್ಲಿ ವಾಸವಿದ್ದು, ಕಚೇರಿಗೆ ಬರಲು ಸಾಧ್ಯವಾಗದೇ ಇದ್ದರೆ ಅಂತಹವರಿಗೆ ಏಳು ದಿನಗಳವರೆಗೆ ವಿಶೇಷ ಸಾಂದರ್ಭಿಕ ರಜೆ ನೀಡಬಹುದು. ಒಂದು ವೇಳೆ ಸೋಂಕಿನಿಂದ ಕ್ವಾರಂಟೈನ್‌ಗೆ ಒಳಗಾದರೆ, 14 ದಿನಗಳ ಸಾಂದರ್ಭಿಕ ರಜೆ ಪಡೆಯಬಹುದು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.