ADVERTISEMENT

ಸ್ವಾಮೀಜಿಯಿಂದ ಪೌರಕಾರ್ಮಿಕರಿಗೆ ಪಾದಪೂಜೆ

ಬೆಡದಹಳ್ಳಿ ಪಂಚಭೂತೇಶ್ವರ ಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 20:13 IST
Last Updated 14 ಜೂನ್ 2020, 20:13 IST
ಮಂಡ್ಯ ಜಿಲ್ಲೆ ಬೆಡದಹಳ್ಳಿ ಗ್ರಾಮದ ಪಂಚಭೂತೇಶ್ವರ ಕ್ಷೇತ್ರದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಲಾಯಿತು
ಮಂಡ್ಯ ಜಿಲ್ಲೆ ಬೆಡದಹಳ್ಳಿ ಗ್ರಾಮದ ಪಂಚಭೂತೇಶ್ವರ ಕ್ಷೇತ್ರದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಲಾಯಿತು   

ಸಂತೇಬಾಚಹಳ್ಳಿ (ಮಂಡ್ಯ): ಕೊರೊನಾ ವೈರಾಣು ಹರಡದಂತೆ ತಡೆಯಲು ಶ್ರಮಿಸಿದ 50 ಪೌರಕಾರ್ಮಿಕರ ಪಾದಪೂಜೆ ಮಾಡಲಾಗಿದೆ.ತಾಲ್ಲೂಕಿನ ಬೆಡದಹಳ್ಳಿ ಗ್ರಾಮದ ಪಂಚಭೂತೇಶ್ವರ ಕ್ಷೇತ್ರದಲ್ಲಿ ಶನಿವಾರ ಮಠದ ಪೀಠಾಧಿಪತಿ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಪಾದ ತೊಳೆದು ಪುಷ್ಪನಮನ ಸಲ್ಲಿಸಲಾಯಿತು.

‘ಕೊರೊನಾ ಸೋಂಕಿತರು ವಾಸವಿದ್ದ ಜಾಗದಲ್ಲಿ ಹಾಗೂ ಕ್ವಾರಂಟೈನ್‌ ಪ್ರದೇಶಕ್ಕೆ ಇತರರು ಹೋಗಲು ಹೆದರುವ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸೋಂಕು ಹರಡದಂತೆ ನೋಡಿಕೊಂಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ’ ಎಂದು ರುದ್ರಮುನಿ ಸ್ವಾಮೀಜಿ ಹೇಳಿದರು.ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT