ADVERTISEMENT

ವಿಶೇಷ ಅಧಿವೇಶನ: ಜ.14ಕ್ಕೆ ಸಂಪುಟದ ತುರ್ತುಸಭೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 17:44 IST
Last Updated 12 ಜನವರಿ 2026, 17:44 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ನರೇಗಾ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ–ಜಿ ರಾಮ್‌ ಜಿ ಕಾಯ್ದೆಯ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲು ಬುಧವಾರ ಸಚಿವ ಸಂಪುಟದ ತುರ್ತುಸಭೆ ಕರೆಯಲಾಗಿದೆ.

ಈ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಅಧಿವೇಶನದಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿ ಜಿ ರಾಮ್‌ ಜಿ ಕುರಿತು ಎಲ್ಲ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ಸುಪ್ರೀಂಕೋರ್ಟ್‌ ಮೊರೆ ಹೋಗಲು ಸಂಪುಟ ತೀರ್ಮಾನಿಸಿತ್ತು. ಅದೇ ದಿನ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು, ವಿಶೇಷ ಅಧಿವೇಶನ ಕರೆಯುವ ಬಗ್ಗೆ ಪ್ರಸ್ತಾಪಿಸಿದ್ದರು. 

ರಾಜ್ಯ ವ್ಯಾಪಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟ ನಡೆಸಲು ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.