ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ಉಗುಳಿದರೆ ₹1,000 ದಂಡ

​ಪ್ರಜಾವಾಣಿ ವಾರ್ತೆ
Published 30 ಮೇ 2025, 16:05 IST
Last Updated 30 ಮೇ 2025, 16:05 IST
ಗುಟ್ಕಾ
ಗುಟ್ಕಾ   

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ ₹1,000 ದಂಡ ವಿಧಿಸಬಹುದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರವು ರೂಪಿಸಿದ್ದ, ‘ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ–2024’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23 ರಂದು ಅಂಕಿತ ಹಾಕಿದ್ದರು.

ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆಯನ್ನು ಜಾರಿಗೆ ತರಲಾಗಿದೆ.

ADVERTISEMENT

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ– ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ ₹1,000 ದಂಡ ವಿಧಿಸಬಹುದಾಗಿದೆ. 

ಉಪಹಾರ ಗೃಹ, ಪಬ್‌, ಬಾರ್‌ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೆ ಅವಕಾಶ ನೀಡುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ಈ ನಿಷೇಧವನ್ನು ಉಲ್ಲಂಘಿಸಿದವರಿಗೆ ₹50,000 ದಿಂದ ₹1 ಲಕ್ಷದವರೆಗೆ ದಂಡ ಮತ್ತು ಒದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.