ಬೆಂಗಳೂರು: ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕ್ರೀಡಾ ಕೋಟಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮೇ16ರಿಂದ 20ರವರೆಗೆ ನಡೆಯಲಿದೆ.
ಯಾವ ಕ್ರೀಡೆಗಳಲ್ಲಿ ಭಾಗವಹಿಸಿದವರು ಅರ್ಹರು ಎಂಬ ಪೂರ್ಣ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಈ ಲಿಂಕ್‌ಗೆ ಮೂಲಕ ಅಭ್ಯರ್ಥಿಗಳು ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡು, ಪರಿಶೀಲನೆಗಾಗಿ ಬೆಂಗಳೂರಿನ ಕಚೇರಿಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
‘ಎ ಮತ್ತು ವೈ’ ಗುಂಪು ಹೊರತುಪಡಿಸಿ, ಉಳಿದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ.
ಡಿಸಿಇಟಿ, ಪಿಜಿ–ಸಿಇಟಿ ಅವಧಿ ವಿಸ್ತರಣೆ:
ಪಿಜಿ–ಸಿಇಟಿ, ಡಿಸಿಇಟಿ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಶುಲ್ಕ ಕಟ್ಟಲು ಮೇ 15ರವರೆಗೆ ಅವಕಾಶ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.