ADVERTISEMENT

ಸಿದ್ದರಾಮಯ್ಯ ದುರಹಂಕಾರಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2018, 18:38 IST
Last Updated 24 ಡಿಸೆಂಬರ್ 2018, 18:38 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ಚಿತ್ರದುರ್ಗ: ‘ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ಅವರಿಗೆ ಅಹಂ ಹೆಚ್ಚಾಗಿದೆ. ಸಮಯಕ್ಕೆ ಸರಿಯಾಗಿ ಭಗವಂತನೇ ಬುದ್ಧಿ ಕಲಿಸುತ್ತಾನೆ’ ಎಂದು ಶಾಸಕ ಬಿ. ಶ್ರೀರಾಮುಲು ಹರಿಹಾಯ್ದರು.

‘ಬಿಜೆಪಿ ಮುಳುಗುವ ಹಡಗು’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಚಳ್ಳಕೆರೆ ತಾಲ್ಲೂಕಿನ ಚಿಕ್ಕಹಳ್ಳಿಯಲ್ಲಿ ತಿರುಗೇಟು ನೀಡಿದರು.

‘ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಬಗ್ಗೆ ದುರಹಂಕಾರದಿಂದ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಅಹಂ ಇಳಿಸಲಿದ್ದೇವೆ’ ಎಂದರು.

ADVERTISEMENT

‘ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ರಮೇಶ ಜಾರಕಿಹೊಳಿ ಅವರಿಗೆ ನೋವಾಗಿದೆ. ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.