ADVERTISEMENT

ಸ್ವತಂತ್ರ ಸಂಸ್ಥೆಯಿಂದ ತನಿಖೆ ಎಸ್‌.ಆರ್‌. ಹಿರೇಮಠ ಆಗ್ರಹ

ಜಿಂದಾಲ್‌ ಕಂಪನಿಗೆ ಕಡಿಮೆ ದರಕ್ಕೆ ಭೂಮಿ ಮಾರಾಟ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 12:06 IST
Last Updated 14 ಜೂನ್ 2019, 12:06 IST
ಎಸ್‌.ಆರ್‌. ಹಿರೇಮಠ
ಎಸ್‌.ಆರ್‌. ಹಿರೇಮಠ   

ಹುಬ್ಬಳ್ಳಿ: ಜಿಂದಾಲ್‌ ಕಂಪನಿಯು ಇದುವರೆಗೆ ಎಸಗಿರುವ ಅಕ್ರಮ ಗಣಿಗಾರಿಕೆ, ಜಲ, ವಾಯು ಮಾಲಿನ್ಯ, ಎಂ.ಎಂ.ಎಲ್‌ ಕಂಪನಿಗೆ ಹಣ ನೀಡದೇ ಇರುವುದು ಹಾಗೂ ಭೂ ಹಗರಣದ ಕುರಿತು ಸ್ವತಂತ್ರ ಸಂಸ್ಥೆಯಿಂದ ಸಮಗ್ರ ತನಿಖೆಯಾಗಬೇಕು ಎಂದು ಸಿಟಿಜನ್‌ ಫಾರ್‌ ಡೆಮಾಕ್ರಿಸಿ(ಸಿಎಫ್‌ಡಿ) ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಆಗ್ರಹಿಸಿದರು.

ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿಯನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವುದಕ್ಕಿಂತ ಲೀಜ್‌ ಮುಂದುವರಿಸಲು ರಾಜ್ಯ ಸರ್ಕಾರ ಪರಿಶೀಲಿಸಬೇಕು ಎಂದು ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದ ಹಿತದೃಷ್ಟಿಗೆ ಮಾರಕವಾಗಿರುವ ಸರ್ಕಾರದ ನಿರ್ಧಾರದ ವಿರುದ್ಧ ಹೋರಾಟ ನಡೆಸಲು ಸಿಎಫ್‌ಡಿ, ಜನ ಸಂಗ್ರಾಮ ಪರಿಷತ್‌, ಜನಾಂದೋಲನಗಳ ಮಹಾ ಮೈತ್ರಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿವೆ. ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಈ ಹೋರಾಟಕ್ಕೆ ಬೆಂಬಲ ಕೇಳಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.