ADVERTISEMENT

ಶತಾಯುಷಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 4:57 IST
Last Updated 17 ಫೆಬ್ರುವರಿ 2020, 4:57 IST
   

ಸಿಂದಗಿ (ವಿಜಯಪುರ): ಸುಕ್ಷೇತ್ರ ಕನ್ನೊಳ್ಳಿ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಬೆಳಿಗ್ಗೆ ಲಿಂಗೈಕ್ಯರಾದರು. 106 ವರ್ಷದ ಶ್ರೀಗಳು ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದರು.

ಮಂಗಳವಾರ (ಫೆ.18) ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಶ್ರೀಮಠದಲ್ಲಿ ವೀರಶೈವ ಸಂಸ್ಕಾರದೊಂದಿಗೆ ಅಪಾರ ಶಿವಾಚಾರ್ಯರ ಸಮ್ಮುಖದಲ್ಲಿ ಲಿಂಗ್ಯೆಕ್ಯ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ ಎಂದು ಶ್ರೀಮಠದ ಪೀಠಾಧಿಕಾರಿ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದ್ದಾರೆ.

ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಮಠಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.