ADVERTISEMENT

‘ಮೈತ್ರಿ ಹೋರಾಟಕ್ಕೆ ಜಯ ನಿಶ್ಚಿತ’

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 19:57 IST
Last Updated 7 ಮಾರ್ಚ್ 2019, 19:57 IST
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಂಪತಿ ಶೃಂಗೇರಿ ಶಾರದಾ ಮಠದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತೀ ತೀರ್ಥ ಸ್ವಾಮೀಜಿ ಅವರನ್ನು ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಪ್ರಜಾವಾಣಿ ಚಿತ್ರ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದಂಪತಿ ಶೃಂಗೇರಿ ಶಾರದಾ ಮಠದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರಭಾರತೀ ತೀರ್ಥ ಸ್ವಾಮೀಜಿ ಅವರನ್ನು ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಪ್ರಜಾವಾಣಿ ಚಿತ್ರ   

ಶೃಂಗೇರಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಹೋರಾಟಕ್ಕೆ ಜಯ ನಿಶ್ಚಿತ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಗುರುವಾರ ಬೆಳಿಗ್ಗೆ ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಕುಟುಂಬದ ಸದಸ್ಯರೊಂದಿಗೆ ಭಾಗವಹಿಸಿದ್ದ ಅವರು ಮಾಧ್ಯಮದವರ ಜತೆ ಮಾತನಾಡಿದರು. ‘ನಾಡಿನ ಜನತೆಗೆ ಒಳಿತಾಗಲೆಂದು ಪ್ರಾರ್ಥಿಸಲು ಶೃಂಗೇರಿಗೆ ಬಂದಿದ್ದೇವೆ. ರಾಜ್ಯದ ಹಲವೆಡೆ ಬರಗಾಲವಿದ್ದು, ಉತ್ತಮ ಮಳೆ-ಬೆಳೆ ಆಗಲೆಂದು ತಾಯಿ ಶಾರದೆಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ ‘ನಿಖಿಲ್ ಗೋಬ್ಯಾಕ್’ ಅಭಿಯಾನದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನಿಖಿಲ್ ರಾಜಕೀಯಕ್ಕೆ ಬರಬೇಕು ಎನ್ನುವವರೂ ಇರುವಂತೆ, ಬರಬಾರದೆನ್ನುವರೂ ಇರುವುದರಿಂದ ಇದಕ್ಕೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ. ಓಟು ಹಾಕುವವರು ಎಲ್ಲೋ ಇದ್ದರೆ, ಸಾಮಾಜಿಕ ಜಾಲತಾಣದಲ್ಲಿ ಇಂಥದನ್ನು ಹರಡುವವರು ಇನ್ನೆಲ್ಲೋ ಇರುತ್ತಾರೆ. ನಮ್ಮ ಪಕ್ಷದ ಮೇಲೆ ವಿಶ್ವಾಸ ಇರುವವರು ನಮಗೆ ಓಟು ಕೊಡುತ್ತಾರೆ’ ಎಂದರು.

ADVERTISEMENT

‘ನಿಖಿಲ್ ರಾಜಕೀಯಕ್ಕೆ ಬರಬೇಕೆಂಬ ಇಚ್ಛೆ ನಮ್ಮದಾಗಿರಲಿಲ್ಲ. ಜನರ ಅಭಿಪ್ರಾಯ, ಒತ್ತಡವನ್ನು ಒಪ್ಪಿಕೊಂಡಿದ್ದೇವೆ’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

‘ಜೆಡಿಎಸ್‌ ವರಿಷ್ಠರು ಪಕ್ಷದ ಶಾಸಕರು, ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ ನಂತರವೇ ಮಂಡ್ಯದ ಲೋಕಸಭಾ ಚುನಾವಣೆಗೆ ನನ್ನನ್ನು ಸ್ಪರ್ಧಿಸಲು ಆಯ್ಕೆ ಮಾಡಿದ್ದಾರೆ. ಜನತೆಯ ನಾಡಿ ಮಿಡಿತವನ್ನು ನಾನು ಅರ್ಥಮಾಡಿಕೊಂಡಿದ್ದು, ಅವರ ಸೇವೆಗೆ ನಾನು ಸದಾ ಸಿದ್ಧನಾಗಿದ್ದೇನೆ’ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.