ADVERTISEMENT

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಶೇ 7.5ಕ್ಕೆ ಹೆಚ್ಚಳ

ನುಡಿದಂತೆ ನಡೆಯುತ್ತೇವೆ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 18:00 IST
Last Updated 3 ಜನವರಿ 2021, 18:00 IST
ಶ್ರೀರಾಮುಲು
ಶ್ರೀರಾಮುಲು   

ಬಾಗಲಕೋಟೆ: ‘ಮಾತು ಕೊಟ್ಟಂತೆ ನಮ್ಮ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಲಿದೆ. ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಯಾವುದೇ ಕಾಲಮಿತಿ ಇಲ್ಲ. ಆದಷ್ಟು ಬೇಗನೇ ಕಾರ್ಯರೂಪಕ್ಕೆ ತರಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ವರದಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಈಗಿರುವ ಶೇ 3ರಿಂದ 7.5 ಹೆಚ್ಚಬೇಕು ಎಂದು ಉಲ್ಲೇಖಿಸಲಾಗಿದೆ. ಜನಸಂಖ್ಯೆ ಆಧರಿಸಿ ಮೀಸಲಾತಿ ಪ್ರಮಾಣ ಹೆಚ್ಚಳಗೊಳಿಸಬೇಕು ಎಂದು ಹೇಳಲಾಗಿದೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನನ್ನ ನೇತೃತ್ವದಲ್ಲಿ ರಚನೆಯಾಗಿರುವ ಸಂಪುಟ ಉಪಸಮಿತಿ ಸಭೆ ಎರಡು ದಿನಗಳ ಹಿಂದೆ ನಡೆದಿದ್ದು, ವರದಿಯ ಸಾಧಕ ಬಾಧಕದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.

ರಮೇಶ ಜಾರಕಿಹೊಳಿ ಬಿಜೆಪಿಗೆ ಬಂದ ಬಳಿಕ ಪಕ್ಷದಲ್ಲಿ ಶ್ರೀರಾಮುಲು ನೇಪಥ್ಯಕ್ಕೆ ಸರಿಯುತ್ತಿದ್ದಾರಾ? ಎಂಬ ಪ್ರಶ್ನೆಗೆ, ‘ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು ಅನ್ನೋದು ಇಡೀ ರಾಜ್ಯದ ಜನರ ಆಶಯವಾಗಿದೆ.ನೋಡೋಣಆ ಬಗ್ಗೆ ಪಕ್ಷದ ನಾಯಕರು ಸೇರಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ರಾಮುಲು ತಳಮಟ್ಟದಿಂದ ರಾಜಕಾರಣ ಮಾಡಿಕೊಂಡು ಈ ಸ್ಥಾನಕ್ಕೆ ಬಂದಿದ್ದಾನೆ. ಹೀಗಾಗಿ ನನ್ನ ಜನಪ್ರಿಯತೆ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.