ADVERTISEMENT

ಜೋಡೆತ್ತುಗಳು ಮಠಸೇರಲಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 23 ಮೇ 2019, 14:39 IST
Last Updated 23 ಮೇ 2019, 14:39 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ಬಳ್ಳಾರಿ: ‘ನಿಂಬೆಕಾಯಿ ಎಚ್‌.ಡಿ.ರೇವಣ್ಣ ಮಠವನ್ನು ಕಟ್ಟುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ರಾಜ್ಯದ ಜೋಡೆತ್ತುಗಳಾದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್‌, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಆ ಮಠವನ್ನು ಸೇರಿಕೊಳ್ಳಲಿ’ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ವ್ಯಂಗ್ಯವಾಡಿದರು.

ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೋದಿ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಸವಾಲು ಹಾಕಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೆಗೌಡ ಕೂಡಲೇ ನಿವೃತ್ತಿ ಹೊಂದಲಿ’ ಎಂದು ಆಗ್ರಹಿಸಿದರು.

‘ರಾಜ್ಯ ಸರಕಾರ ಬಹಳ ದಿನಗಳ ಕಾಲ ಉಳಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಮುಗಿದ ಕೂಡಲೇ ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಚಿಂಚೋಳಿಯಲ್ಲಿ ಪಕ್ಷ ಗೆದ್ದಿದ್ದು 110 ಜನ ಶಾಸಕರಿದ್ದಾರೆ. ಪಕ್ಷೇತರರು ಸೇರಿಸಿ ಸರ್ಕಾರ ರಚಿಸಲು ನಾವು ಸಮರ್ಥರಿದ್ದೇವೆ’ ಎಂದು ಪ್ರತಿಪಾದಿಸಿದರು.

ADVERTISEMENT

‘ಬಳ್ಳಾರಿ ಜನ ಮೈತ್ರಿ ಪಕ್ಷವನ್ನು ಸೋಲಿಸಿದ್ದಾರೆ. ಜಿಲ್ಲೆಯ ಜನರ ಜೋಶ್ ಹೇಗಿದೆ ಮೈತ್ರಿಪಕ್ಷದವರು ಮುಟ್ಟಿ ನೋಡಿಕೊಳ್ಳಬೇಕು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡಲೇ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.