
ಪ್ರಜಾವಾಣಿ ವಾರ್ತೆ
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ನೀರಾಟವಾಡಲು ನಾಲೆಗೆ ಇಳಿದ ಆರು ವಿದ್ಯಾರ್ಥಿಗಳ ಪೈಕಿ ಒಬ್ಬ ಬಾಲಕಿ ಮೃತಪಟ್ಟಿದ್ದು, ಮೂವರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ತಾಲ್ಲೂಕಿನ ಮಂಡ್ಯಕೊಪ್ಪಲು ಸಮೀಪದ ಕಾವೇರಿ ಬೋರೇದೇವರ ದೇವಾಲಯದ ಸಮೀಪದ ರಾಮಸ್ವಾಮಿ ನಾಲೆಯಲ್ಲಿ ಶನಿವಾರ ದುರ್ಘಟನೆ ನಡೆದಿದೆ.
ಮೈಸೂರಿನ ಶಾಂತಿನಗರದ ಆಯಿಷಾ ಅಫ್ರೀನ್ (14) ಮೃತಪಟ್ಟಿದ್ದು, ಅದೇ ಶಾಲೆಯ ತರ್ಬೀನ್ (13), ಅಮೀನಾ (13) ಮತ್ತು ಅನಿಷಾ (14) ಅವರ ಸುಳಿವು ಸಿಕ್ಕಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.