ADVERTISEMENT

ಕನ್ನಡಿಗರ ಕತ್ತು ಸೀಳುವ ಸರ್ಕಾರ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 21:00 IST
Last Updated 29 ಅಕ್ಟೋಬರ್ 2022, 21:00 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ಬೆಂಗಳೂರು: ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗವು (ಎಸ್ಎಸ್‌ಸಿ) ಕಾನ್‌ಸ್ಟೆಬಲ್‌ಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡುವ ಮೂಲಕ, ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಕತ್ತು ಸೀಳುವ, ಅನ್ನ ಕಸಿಯುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಟೀಕಿಸಿದ್ದಾರೆ.

‘ಕೋಟಿ ಕಂಠ ಗಾಯನ’ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದಾಗಬೇಕಿತ್ತು. ಅದರ ಬದಲು, ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ. ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡದ ಕತ್ತು ಹಿಸುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಕೇಂದ್ರದ ಬಿಜೆಪಿ ಸರ್ಕಾರ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ ಉತ್ಕಟವಾಗಿದೆ ಎನ್ನುವುದಕ್ಕೆ ಈ ಪರೀಕ್ಷೆಯೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ADVERTISEMENT

ಕಾನ್‌ಸ್ಟೆಬಲ್‌ ಆಗಲು ಹಿಂದಿ–ಇಂಗ್ಲಿಷ್‌ ಬೇಕು ಎಂದಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ? ಎಂದು ಅವರು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.