ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಶೇ 30.39 ಫಲಿತಾಂಶ

ನಾಲ್ವರಿಗೆ 625ಕ್ಕೆ 625 ಅಂಕ, 6,635 ವಿದ್ಯಾರ್ಥಿಗಳ ಅಂಕ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 16:28 IST
Last Updated 13 ಜೂನ್ 2025, 16:28 IST
<div class="paragraphs"><p>ಇಂಟರ್‌ನೆಟ್‌ ಕೇಂದ್ರವೊಂದರಲ್ಲಿ ಸೋಮವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ವೀಕ್ಷಿಸಿದ ವಿದ್ಯಾರ್ಥಿಗಳು.               ಚಿತ್ರ: ಸಂಗಮೇಶ ಬಡಿಗೇರ</p></div>

ಇಂಟರ್‌ನೆಟ್‌ ಕೇಂದ್ರವೊಂದರಲ್ಲಿ ಸೋಮವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ವೀಕ್ಷಿಸಿದ ವಿದ್ಯಾರ್ಥಿಗಳು. ಚಿತ್ರ: ಸಂಗಮೇಶ ಬಡಿಗೇರ

   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2.78 ಲಕ್ಷ ವಿದ್ಯಾರ್ಥಿಗಳಲ್ಲಿ 84,597 ಮಂದಿ (ಶೇ 30.39) ತೇರ್ಗಡೆಯಾಗಿದ್ದಾರೆ.

ಪರೀಕ್ಷೆ–1 ಬರೆಯದ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ–2ಕ್ಕೆ ಹಾಜರಾಗಿದ್ದರು. ಅವರ ಫಲಿತಾಂಶವೂ ಸೇರಿ 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶ ಉತ್ತಮಪಡಿಸಿಕೊಳ್ಳಲು 11,818 ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು ಪರೀಕ್ಷೆ–1ರಲ್ಲಿ ಪಡೆದಿದ್ದಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಪಡೆಯುವಲ್ಲಿ ಸಫಲರಾಗಿದ್ದಾರೆ. ಅವರಲ್ಲಿ ಒಬ್ಬರು ಸರ್ಕಾರಿ ಶಾಲೆಯ ವಿದ್ಯಾರ್ಥಿ.

ADVERTISEMENT

ಪರೀಕ್ಷೆ–2ರಲ್ಲಿ ಕನ್ನಡ ಭಾಷಾ ವಿಷಯದಲ್ಲಿ 51,185 ವಿದ್ಯಾರ್ಥಿಗಳು, ಇಂಗ್ಲಿಷ್‌ನಲ್ಲಿ 29,529 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡೂ ಪರೀಕ್ಷೆಗಳಿಂದ ಒಟ್ಟು 6.10 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿದ್ದು, ಒಟ್ಟಾರೆ ಫಲಿತಾಂಶ ಶೇ 76.68ಕ್ಕೆ ಏರಿಕೆಯಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.