ADVERTISEMENT

ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ,ಎಸ್ಸೆಸ್ಸೆಲ್ಸಿ ಮಕ್ಕಳ ತಾಯಿ:ಸಚಿವ ಸುರೇಶ್ ಕುಮಾರ್

ಮಡಿಕೇರಿಯ ಶಿಕ್ಷಕಿ ಕವಿತಾಗೆ ಧನ್ಯವಾದ ತಿಳಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 2:52 IST
Last Updated 14 ಜುಲೈ 2020, 2:52 IST
ಶಿಕ್ಷಕಿ ಕವಿತಾ
ಶಿಕ್ಷಕಿ ಕವಿತಾ    

ಮಡಿಕೇರಿ: ತಾಯಿಯ ನಿಧನದ ದುಃಖದಲ್ಲೂ, ಸೋಮವಾರ ಮಡಿಕೇರಿಯ ಸೇಂಟ್ ಮೈಕಲ್ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆ ತೋರಿದ್ದ ಶಿಕ್ಷಕಿ ಕವಿತಾ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಅವರು‌ ಧನ್ಯವಾದ ತಿಳಿಸಿದ್ದಾರೆ.

‘ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು, ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ, ಎಸ್ಸೆಸ್ಸೆಲ್ಸಿ ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ’ಎಂದು ಸಚಿವರು ಹೇಳಿದ್ದಾರೆ.

ಶಿಕ್ಷಕಿ ಕವಿತಾ ಅವರ ತಾಯಿ, ತಾಲ್ಲೂಕಿನ ಬೆಟ್ಟಗೇರಿಯಲ್ಲಿ ಸೋಮವಾರ ಮುಂಜಾನೆ ನಿಧನರಾಗಿದ್ದರು. ಮೌಲ್ಯಮಾಪನ ಕಾರ್ಯ ಮುಗಿದ ಮೇಲೆ ಶಿಕ್ಷಕಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.