ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಜೂನ್ 14ರಿಂದ ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಆರಂಭವಾಗುತ್ತಿದ್ದು, ಏಳು ಮಾಧ್ಯಮಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ.
ಜೂನ್ 22ರವರೆಗೆ ನಡೆಯಲಿರುವ ಪರೀಕ್ಷೆಗೆ 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ 2.23 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.
ಪ್ರತಿ ಕೇಂದ್ರದಲ್ಲೂ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಮೊದಲ ಪರೀಕ್ಷೆಯಂತೆಯೇ ಈಗಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರಲಿದೆ. ಜಿಲ್ಲಾ ಹಾಗೂ ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಕಾರ್ಯನಿರ್ವಹಿಸಲಿವೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.