ADVERTISEMENT

ಆಗಸ್ಟ್ 2ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ–3

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 16:23 IST
Last Updated 31 ಜುಲೈ 2024, 16:23 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–3 ಆ.2ರಿಂದ 9ರವರೆಗೆ 410 ಕೇಂದ್ರಗಳಲ್ಲಿ ನಡೆಯಲಿದೆ. 

67,716 ಬಾಲಕರು, 30,217 ಬಾಲಕಿಯರು ಸೇರಿದಂತೆ ಒಟ್ಟು 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಮೂರನೇ ಪರೀಕ್ಷೆ ತೆಗೆದುಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಇರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ.

ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಶೇ 31.02 ಫಲಿತಾಂಶ ಬಂದಿತ್ತು. ಪರೀಕ್ಷೆ ಬರೆದಿದ್ದ 2.23 ಲಕ್ಷ ವಿದ್ಯಾರ್ಥಿಗಳಲ್ಲಿ 69,275 ಮಂದಿ ತೇರ್ಗಡೆಯಾಗಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.