ADVERTISEMENT

ಎಸ್ಸೆಸ್ಸೆಲ್ಸಿ: ಉತ್ತೀರ್ಣರಾಗಲು ಶೇ 10 ಕೃಪಾಂಕ

​ಪ್ರಜಾವಾಣಿ ವಾರ್ತೆ
Published 12 ಮೇ 2022, 22:15 IST
Last Updated 12 ಮೇ 2022, 22:15 IST
   

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಂಕಗಳ ಕೊರತೆಯಾಗುವವರಿಗೆ ಈ ಬಾರಿಯೂ ಗರಿಷ್ಠ ಶೇ 10 ರಷ್ಟು ಕೃಪಾಂಕ ನೀಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ಯಾವುದಾದರೂ ಮೂರು ವಿಷಯಗಳಿಗೆ ಮಾತ್ರ ಈ ಕೃಪಾಂಕ ಅನ್ವಯವಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌– 19 ಸಾಂಕ್ರಾಮಿಕ ಕಾಯಿಲೆಯಿಂದಾಗಿ ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿದಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

25 ಕ್ಕಿಂತ ಹೆಚ್ಚು ಮತ್ತು 30ಕ್ಕಿಂತ ಕಡಿಮೆ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ.

ADVERTISEMENT

2021 ರಲ್ಲಿಯೂ ಶೇ 10 ರಷ್ಟು ಕೃಪಾಂಕ ನೀಡಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್‌ ಕಾರಣಕ್ಕೆ ಪರೀಕ್ಷೆಗೆ ಹಾಜರಾದ ಎಲ್ಲರನ್ನೂ ಸಾಮೂಹಿಕವಾಗಿ ಉತ್ತೀರ್ಣಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.