ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ನೋಂದಣಿ ದಿನಾಂಕ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ಮೇ 2024, 15:14 IST
Last Updated 16 ಮೇ 2024, 15:14 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಜೂನ್‌ 7ರಿಂದ 14ರವರೆಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆ ನಡೆಯಲಿದ್ದು, ನೋಂದಣಿ ದಿನಾಂಕವನ್ನು ಮೇ 19ರವರೆಗೆ ವಿಸ್ತರಿಸಲಾಗಿದೆ.

ಮೊದಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೂ ಸುಮಾರು 2 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತಿದೆ. 

ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ವೇಳಾಪಟ್ಟಿ

ಜೂನ್‌ 7–ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ,  8–ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು, 10–ಗಣಿತ, 11–ಅರ್ಥಶಾಸ್ತ್ರ, ಎಂಜನಿಯರಿಂಗ್‌ ವಿಷಯಗಳು, 12–ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 13–ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 14–ಸಮಾಜ ವಿಜ್ಞಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.