ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳು
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ–3 ಫಲಿತಾಂಶ ಬುಧವಾರ ಪ್ರಕಟವಾಗಿದ್ದು, 42,085 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಮೊದಲ ಮತ್ತು ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಖಾಸಗಿಯಾಗಿ 2.09 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಉತ್ತಮಪಡಿಸಿಕೊಳ್ಳಲು ಮತ್ತೆ ಪರೀಕ್ಷೆ ಬರೆದಿದ್ದ 1,455 ವಿದ್ಯಾರ್ಥಿಗಳಲ್ಲಿ 455 ಮಂದಿ ಎರಡೂ ಪರೀಕ್ಷೆಗಳಿಗಿಂತ ಹೆಚ್ಚಿನ ಅಂಕ ಪಡೆದಿದ್ದಾರೆ.
ಕನ್ನಡ ಭಾಷಾ ಪರೀಕ್ಷೆ ಬರೆದಿದ್ದ 1.25 ಲಕ್ಷ ವಿದ್ಯಾರ್ಥಿಗಳಲ್ಲಿ 24,453, ಆಂಗ್ಲ ಭಾಷೆಯ ಪರೀಕ್ಷೆ ಬರೆದಿದ್ದ 47,360 ವಿದ್ಯಾರ್ಥಿಗಳಲ್ಲಿ 11,922 ಮಂದಿ ತೇರ್ಗಡೆಯಾಗಿದ್ದಾರೆ. ಸರ್ಕಾರಿ ಶಾಲೆಯ 16,363 ವಿದ್ಯಾರ್ಥಿಗಳು ಮೂರನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.