ADVERTISEMENT

SSLC ಪರೀಕ್ಷೆ ವರ್ಷಕ್ಕೆ ಮೂರು ಬಾರಿಯೇ ಇರಲಿದೆ, ಗೊಂದಲ ಬೇಡ; ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 10:55 IST
Last Updated 5 ಡಿಸೆಂಬರ್ 2025, 10:55 IST
<div class="paragraphs"><p>ಮಧು ಬಂಗಾರಪ್ಪ</p></div>

ಮಧು ಬಂಗಾರಪ್ಪ

   

ಶಿವಮೊಗ್ಗ: 'ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಈಗಿನಂತೆ ವರ್ಷಕ್ಕೆ ಮೂರು ಬಾರಿಯೇ ಮುಂದುವರೆಯಲಿದೆ. ಅದನ್ನು ಎರಡು ಬಾರಿಗೆ ಇಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪರೀಕ್ಷೆಗಳ ಸಂಖ್ಯೆಯನ್ನು ಎರಡು ಬಾರಿಗೆ ಇಳಿಸಲಾಗುತ್ತದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ಸುದ್ದಿ ಪ್ರಕಟವಾಗಿದೆ. ಇದರಿಂದ ಮಕ್ಕಳಲ್ಲಿ ವೃಥಾ ಗೊಂದಲ ಉಂಟಾಗಲಿದೆ. ಅವರು ಧೈರ್ಯ ಕಳೆದುಕೊಳ್ಳಲಿದ್ದಾರೆ. ಇಂತಹ ವಿಷಯಗಳಲ್ಲಿ ಮಾಧ್ಯಮದವರು ಜವಾಬ್ದಾರಿಯಿಂದ ವರ್ತಿಸಲಿ. ಆ ಬಗ್ಗೆ ಅನಗತ್ಯ ಚರ್ಚೆಗಳೂ ಬೇಡ' ಎಂದು ಸಲಹೆ ನೀಡಿದರು.

ADVERTISEMENT

ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುವುದಿದ್ದರೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅದನ್ನು ಮಾಧ್ಯಮಗಳಿಗೆ ತಿಳಿಸಿಯೇ ಮುಂದುವರೆಯಲಿದ್ದೇವೆ. ಹೀಗಾಗಿ ಆತುರ ಬೇಡ ಎಂದರು.

ಎಲೆಚುಕ್ಕಿ ರೋಗಕ್ಕೆ ಪರಿಹಾರ:

'ಅಡಿಕೆಗೆ ಎಲೆಚುಕ್ಕಿ ರೋಗದಿಂದ ಆಗಿರುವ ನಷ್ಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಬೆಳೆಗಾರರಿಗೆ ₹180 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ನೀಡಲು ಮುಂದಾಗಿದೆ. ಅದರಲ್ಲಿ ₹68 ಕೋಟಿ ಶಿವಮೊಗ್ಗ ಜಿಲ್ಲೆಗೆ ನಿಗದಿಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ' ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.