ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ; ಚಿತ್ರಗಳಲ್ಲಿ ನೋಡಿ
ಹಿಜಾಬ್ ಹಾಗೂ ಸಮವಸ್ತ್ರಕ್ಕೆ ಸಂಬಂಧಿಸಿದ ಗೊಂದಲಗಳ ನಡುವೆ ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇಂದಿನಿಂದ (ಮಾ.28) ಆರಂಭವಾಗಿವೆ.8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 4,52,732 ಬಾಲಕರು, 4,21,110 ಬಾಲಕಿಯರು, ನಾಲ್ವರು ತೃತೀಯ ಲಿಂಗಿಗಳು, 4,618 ಪುನರಾವರ್ತಿತ ಅಭ್ಯರ್ಥಿಗಳು, 46,200 ಮಂದಿ ಖಾಸಗಿ ಅಭ್ಯರ್ಥಿಗಳು ಇದ್ದಾರೆ.
ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 6:22 IST
Last Updated 28 ಮಾರ್ಚ್ 2022, 6:22 IST
ಬೆಳಗಾವಿಯ ಪರೀಕ್ಷಾ ಕೇಂದ್ರವೊಂದರ ನೋಟಿಸ್ ಬೋರ್ಡ್‌ನಲ್ಲಿ ಕೊಠಡಿ ಸಂಖ್ಯೆ ಹುಡುಕಿದ ವಿದ್ಯಾರ್ಥಿಗಳು
ಚಾಮರಾಜನಗರದ ಪರೀಕ್ಷಾ ಕೇಂದ್ರವೊಂದರ ಬಳಿ ಪೊಲೀಸರು
ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು. ಕೋವಿಡ್ ನಿಯಮಾವಳಿ ಅನುಸರಿಸಲಾಯಿತು.
ಕಲಬುರಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು
ಮೈಸೂರಿನಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್
ರಾಯಚೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಮಕ್ಕಳು
ತುಮಕೂರು: ಪರೀಕ್ಷಾ ಕೊಠಡಿ ಮಾಹಿತಿ ಹುಡುಕುತ್ತಿರುವ ವಿದ್ಯಾರ್ಥಿನಿಯರು
ಕಾರವಾರದ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದು
ಕಾರವಾರದ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳ ದೇಹದ ಉಷ್ಣತೆ ಪರಿಶೀಲನೆ
ಕಾರವಾರದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಕರೆತಂದ ಪಾಲಕರು
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯ ಹಾದಿ ತೋರಿದ ಶಿಕ್ಷಕಿ
ಬೆಳಗಾವಿಯ ಸರ್ದಾರ್ ಪ್ರೌಢಶಾಲೆಯಲ್ಲಿ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರಿಗೆ ಗುಲಾಬಿ ಹೂ ನೀಡಿ ಶುಭ ಹಾರೈಸಿದ ಬಿಜೆಪಿ ಶಾಸಕ ಅನಿಲ ಬೆನಕೆ