ADVERTISEMENT

ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ: ಶೇ 98.12 ಹಾಜರಾತಿ, ನಾಲ್ವರು ಡಿಬಾರ್

ಶುಕ್ರವಾರ ಕೊನೆಯ ಪ‍ರೀಕ್ಷೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 19:57 IST
Last Updated 2 ಜುಲೈ 2020, 19:57 IST

ಬೆಂಗಳೂರು: ಎಸ್ಸೆಸ್ಸೆಲ್ಲಿಯ ಪ್ರಥಮ ಭಾಷೆ ಪರೀಕ್ಷೆ ಗುರುವಾರ ನಡೆದಿದ್ದು, ಶೇ 98.12ರಷ್ಟು ಹಾಜರಾತಿ ದಾಖಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ನಾಲ್ವರನ್ನು ಡಿಬಾರ್ ಮಾಡಲಾಗಿದೆ.

ಬೆಂಗಳೂರಿನ ಎಂ.ಎಸ್‌.ರಾಮಯ್ಯ ನಗರದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಮಕ್ಕಳನ್ನು ಕರೆದೊಯ್ಯಲು ಪೋಷಕರು ಅಂತರ ಕಾಪಾಡಿಕೊಂಡು ನಿಂತಿದ್ದರು.

‘7,78,618 ವಿದ್ಯಾರ್ಥಿಗಳ ಪೈಕಿ 7,64,006 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಹಾಜರಾತಿ ಶೇ 98.93ರಷ್ಟಿತ್ತು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ತಿಳಿಸಿದ್ದಾರೆ.‌‌

ADVERTISEMENT

17 ವಿದ್ಯಾರ್ಥಿಗಳು ನಿರಾಳ: ಕೊಪ್ಪಳ ಜಿಲ್ಲೆಯ ಕಾರಟಗಿಯ ಶರಣಬಸವೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢಪಟ್ಟಿತ್ತು. ಆ ಕೊಠಡಿಯಲ್ಲಿದ್ದ ಇತರ 17 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದ್ದು, ಅವರೆಲ್ಲ ಪ್ರತ್ಯೇಕ ಕೊಠಡಿಯಲ್ಲಿ ಗುರುವಾರ ಪರೀಕ್ಷೆ ಬರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.