ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೂಡಿಕೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 13 ಮೇ 2021, 11:32 IST
Last Updated 13 ಮೇ 2021, 11:32 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್  (ಪ್ರಜಾವಾಣಿ ಚಿತ್ರ)
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ (ಪ್ರಜಾವಾಣಿ ಚಿತ್ರ)   

ಬೆಂಗಳೂರು: ಜೂನ್ 21 ರಿಂದ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಶಾಲಾ ಸಂಘಟನೆಗಳ ಆತಂಕವನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.

‘ಕೋವಿಡ್ ಎರಡನೇ‌ ಅಲೆಯ ಹರಡುವಿಕೆ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ, ಸಾಕಷ್ಟು ದಿನಗಳ ಮೊದದಲೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

’ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.