ADVERTISEMENT

ಎಸ್‌ಎಸ್‌ಎಲ್‌ಸಿ: ಸೆ.24ರಿಂದ ಅರ್ಧವಾರ್ಷಿಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 1:24 IST
Last Updated 13 ಸೆಪ್ಟೆಂಬರ್ 2024, 1:24 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

(ಐಸ್ಟಾಕ್ ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ–1) ಸೆ. 24ರಿಂದ ಅ.1ರವರೆಗೆ ನಡೆಯಲಿವೆ.

ADVERTISEMENT

ಇದೇ ಮೊದಲ ಬಾರಿ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುತ್ತದೆ. ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲ ಶಾಲೆಗಳಿಗೂ ತಲುಪಲಿವೆ. ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ಅ.1ರಂದು ಮಧ್ಯಾಹ್ನ 2ರಿಂದ ಆಯಾ ಶಾಲೆಗಳಲ್ಲಿ ನಡೆಸಲು ಮಂಡಳಿ ಸೂಚಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.