
ಪರೀಕ್ಷೆ
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಶಾಲಾ ಶಿಕ್ಷಣ ಇಲಾಖೆ, ಎಸ್‌ಎಸ್‌ಎಲ್‌ಸಿ ಎರಡನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಯವನ್ನು ಬದಲಾವಣೆ ಮಾಡಿದೆ.
ಇದೇ ಜ.27ರಿಂದ ಫೆ.2ರವರೆಗೆ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 10ರ ಬದಲಿಗೆ 11ರಿಂದ ಆರಂಭವಾಗಲಿವೆ. ಎಲ್ಲ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9ಕ್ಕೆ ತರಗತಿಗಳಿಗೆ ಹಾಜರಾಗುವುದನ್ನು ಕಡ್ಡಾಯ ಮಾಡಲಾಗಿದೆ. 9ರಿಂದ 10.30ರವರೆಗೆ ತರಗತಿ ನಡೆಸಲಾಗುತ್ತದೆ.
ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಆಯಾ ದಿನ ಬೆಳಿಗ್ಗೆ 9.30ಕ್ಕೆ ಶಾಲಾ ಲಾಗಿನ್‌ನಿಂದ ಡೌನ್‌ಲೋಡ್ ಮಾಡಬೇಕು. 10 ಗಂಟೆಯ ಒಳಗೆ ಮುದ್ರಣ ಮಾಡಿಕೊಳ್ಳಬೇಕು. 10.30ರ ಒಳಗೆ ಸಿದ್ಧವಾಗಬೇಕು. 10.50ಕ್ಕೆ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪ ನಿರ್ದೇಶಕರನ್ನು ಹೊಣೆ ಮಾಡಲಾಗುವುದು. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.