ADVERTISEMENT

SSLC ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪೂರ್ವ ಸಿದ್ಧತೆ: ಇಲ್ಲಿದೆ ವೇಳಾಪಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜನವರಿ 2026, 2:55 IST
Last Updated 3 ಜನವರಿ 2026, 2:55 IST
<div class="paragraphs"><p>ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಿದ್ದತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು</p></div>

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಿದ್ದತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು

   

ಪ್ರಜಾವಾಣಿ ಚಿತ್ರ

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ಸೋಮವಾರದಿಂದ (ಜನವರಿ 5) ಆರಂಭವಾಗಲಿವೆ.

ADVERTISEMENT

ಮುಖ್ಯ ಪರೀಕ್ಷೆಗೆ ಮೂರು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ.

ಈ ಸಂಬಂಧ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಪೂರ್ವ ಸಿದ್ಧತಾ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ತಿಳಿಸಿದೆ.

ಪರೀಕ್ಷೆಗಳು ಯಾವಾಗ?
ಮೊದಲ ಹಂತ: 2026ರ ಜನವರಿ 5ರಿಂದ 10
ಎರಡನೇ ಹಂತ: 2026ರ ಜನವರಿ 27ರಿಂದ ಫೆಬ್ರುವರಿ 2
ಮೂರನೇ ಹಂತ: 2026ರ ಫೆಬ್ರುವರಿ 23ರಿಂದ 28

ವೇಳಾಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಂಡು ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಎಲ್ಲ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಹಾಗೂ ಪರೀಕ್ಷೆ ಕುರಿತ ಮಾಹಿತಿಯು ಎಲ್ಲ ವಿದ್ಯಾರ್ಥಿಗಳಿಗೆ ತಲುಪಲು ಕ್ರಮವಹಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.

ವೇಳಾಪಟ್ಟಿಯ ಅನುಸಾರ ಆಯಾ ದಿನದ ಪ್ರಶ್ನೆಪತ್ರಿಕೆಗಳನ್ನು ಮುಖ್ಯಶಿಕ್ಷಕರ ಲಾಗಿನ್‌ಗೆ ಅಪ್‌ಲೋಡ್‌ ಮಾಡಲಾಗುವುದು. ಅವುಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಮುದ್ರಿಸಿ, ಪರೀಕ್ಷೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.

ಮುಖ್ಯ ಪರೀಕ್ಷೆಯಂತೆಯೇ, ಪಾರದರ್ಶಕವಾಗಿ ಪರೀಕ್ಷೆ ಆಯೋಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ಮಾಡುವ ಹೊಣೆ ಎಲ್ಲ ಜಿಲ್ಲಾ ಉಪನಿರ್ದೇಶಕರದ್ದಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮತ್ತಿತರ ಪ್ರಕರಣಗಳು ಪತ್ತೆಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಮರುದಿನವೇ ಮೌಲ್ಯಮಾಪನ
ಪರೀಕ್ಷೆ ಮುಕ್ತಾಯವಾದ ಮರುದಿನವೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಬೇಕಿದೆ. ಕಲಿಕೆಯಲ್ಲಿನ ಹಿಂದುಳಿದಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಫಲಿತಾಂಶದ ಮಾಹಿತಿ ನೀಡಿ, ಸುಧಾರಣೆ ಕ್ರಮ ಕೈಗೊಳ್ಳಬೇಕಿದೆ.

ಮುಖ್ಯ ಪರೀಕ್ಷೆ ಯಾವಾಗ?
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ವೇಳಾ ಪಟ್ಟಿ 2025ರ ನವೆಂಬರ್‌ನಲ್ಲೇ ಪ್ರಕಟವಾಗಿದೆ. ಮಾರ್ಚ್‌ 18ರಂದು ಆರಂಭವಾಗಲಿದ್ದು, ಏಪ್ರಿಲ್‌ 2ಕ್ಕೆ ಮುಕ್ತಾಯವಾಗಲಿದೆ.

Preparatory Examination-1.pdf
ಓಪನ್ ಮಾಡಿ
Preparatory Examination-2.pdf
ಓಪನ್ ಮಾಡಿ
Preparatory Examination-3.pdf
ಓಪನ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.