ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 14 ವಿದ್ಯಾರ್ಥಿಗಳ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 18:55 IST
Last Updated 3 ಮಾರ್ಚ್ 2020, 18:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಎಸ್ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವಿದ್ಯಾರ್ಥಿಗಳನ್ನು ಉತ್ತರ ವಿಭಾಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಫೆ. 20ರಂದು ಗಣಿತ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಆಗಿತ್ತು. ವಿದ್ಯಾರ್ಥಿಯೊಬ್ಬ ಹೊಂದಿದ್ದ ಸಾಮಾಜಿಕ ಜಾಲತಾಣ ಖಾತೆಯಿಂದಲೂ ಹಂಚಿಕೊಳ್ಳಲಾಗಿತ್ತು. ಈ ಕುರಿತು ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕ ಬಸವರಾಜು ಉತ್ತರ ವಿಭಾಗದ ಸೈಬರ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

‘ಪ್ರಕರಣ ಸಂಬಂಧ ಬಂಗಾರಪೇಟೆಯ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಆದರೆ, ಅವರಿಗೆ ಪ್ರಶ್ನೆಪತ್ರಿಕೆ ಹೇಗೆ ದೊರೆಯಿತು ಎಂಬ ಬಗ್ಗೆ ಗೊತ್ತಾಗಿಲ್ಲ. ವಿಚಾರಣೆಗೆ ಹಾಜರಾದವರು ಕೂಡಾ ತಮಗೆ ಸಾಮಾಜಿಕ ಜಾಲತಾಣದಲ್ಲಿಯೇ ಸಿಕ್ಕಿತು ಎಂದು ತಿಳಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

‘ಪೂರ್ವಭಾವಿ ಪರೀಕ್ಷೆ ಪ್ರಶ್ನೆಪತ್ರಿಕೆಯನ್ನು ಕಳವು ಮಾಡಿ ವಿದ್ಯಾರ್ಥಿಗಳಿಗೆ ತಲುಪಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಸೋರಿಕೆ ಮಾಡಿದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದೂ ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.