ADVERTISEMENT

‘ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ’

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 19:49 IST
Last Updated 26 ಮಾರ್ಚ್ 2019, 19:49 IST

ಬೆಂಗಳೂರು: ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆ ನಕಲಿ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಸ್ಪಷ್ಟಪಡಿಸಿದ್ದಾರೆ.

‘ನಾಳೆ(ಬುಧವಾರ) ನಡೆಯಬೇಕಾಗಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ. ವಾಟ್ಸ್ಆ್ಯಪ್‌ನಲ್ಲಿ ಹರಿದಾಡುತ್ತಿರುವ ಪ್ರಶ್ನೆ ಪತ್ರಿಕೆ 2016ರ ಸಾಲಿನದಾಗಿದೆ. ಆದ್ದರಿಂದ, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬೇಕಿಲ್ಲ. ಹಳೆ ಪ್ರಶ್ನೆ ಪತ್ರಿಕೆಹರಿ ಬಿಟ್ಟು ದಾರಿ ತಪ್ಪಿಸಲು ಯತ್ನಿಸಿರುವ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ’ ಎಂದರು.

ಈ ಕೃತ್ಯ ಎಸಗಿದವರಿಗೆ 3 ರಿಂದ 5 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದವರೆಗೆ ದಂಡ ವಿಧಿಸಬಹುದಾಗಿದೆ.

ADVERTISEMENT

ಬಂಧನ: ರಾಯಭಾಗ್ ತಾಲ್ಲೂಕಿನ ಎಚ್‌ವಿಎಚ್‌ ಕಾಲೇಜು ಮತ್ತು ಅಲಕನೂರು ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಗಣಿತ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.