SSLC Result 2025: ವಿದ್ಯಾರ್ಥಿಗಳ ಸಂಭ್ರಮ (ಸಾಂಕೇತಿಕ ಚಿತ್ರ)
ಬೆಂಗಳೂರು: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶುಕ್ರವಾರ ಪ್ರಕಟಿಸಿದೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ 2,818 ಕೇಂದ್ರಗಳಲ್ಲಿ 4.34 ಲಕ್ಷ ಬಾಲಕಿಯರು ಸೇರಿ ಒಟ್ಟು 8.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಫಲಿತಾಂಶ ವೀಕ್ಷಣೆಯ ವೆಬ್‌ಸೈಟ್‌ಗಳು:
ಆಯಾ ಶಾಲೆಗಳಲ್ಲೂ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.